2 Samuel 23:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ: ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
Kannada BSI Bible 2016
ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ರಣವೀರರ ಪಟ್ಟಿ - ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
Kannada Bible (KNCL) BSI 2016
ದಾವೀದನ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷೆಬಷ್ಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಎನ್ನಿಸಿಕೊಳ್ಳುವ ಇವನು ಒಮ್ಮೆಗೆ ಎಂಟುನೂರು ಮಂದಿಯನ್ನು ಕೊಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಪರಾಕ್ರಮಶಾಲಿಗಳ ಹೆಸರುಗಳು ಇವೇ: ಮೂರು ಜನ ಮುಖ್ಯಸ್ಥರಲ್ಲಿ ಒಬ್ಬನು ತಹ್ಕೆಮೋನ್ಯನಾದ ಯೋಷೆಬ್ ಬಷ್ಷೆಬೆತ ಎಂಬವನು; ಇವನು ತನ್ನ ಈಟಿಯಿಂದ ಎಂಟುನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.