2 Samuel 23:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
Kannada BSI Bible 2016
ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನು ಒಬ್ಬನಾಗಿದ್ದನು.
Kannada Bible (KNCL) BSI 2016
ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.