2 Samuel 24:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಅವನಿಗೆ, “ನೀನು ಹೋಗಿ, ದಾವೀದನಿಗೆ ಹೋಗಿ ಹೇಳು, “ಯೆಹೋವನು ಹೀಗೆ ಹೇಳುತ್ತಾನೆ, ‘ನಾನು ಮೂರು ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಒಂದನ್ನು ಆರಿಸಿಕೋ”‘ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು.
Kannada BSI Bible 2016
ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದಾವೀದನ ಹತ್ತಿರ ಹೋಗಿ ಅವನಿಗೆ - ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
“ನೀನು ದಾವೀದನ ಹತ್ತಿರ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಅದನ್ನು ಆರಿಸಿಕೋ,’ ಎಂದು ಸರ್ವೇಶ್ವರ ನುಡಿಯುತ್ತಾರೆ ಎಂದು ಹೇಳು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.