2 Samuel 24:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನಮ್ಮನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.
Kannada BSI Bible 2016
ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.