2 Samuel 24:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರುಜಿನಗಳನ್ನು ಬರಮಾಡಿದನು. ಇವು ಹೊತ್ತಾರೆಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದುವರಿದವು. ದಾನ್‌ನಿಂದ ಬೇರ್ಷೆಬದವರೆಗೆ ಎಪ್ಪತ್ತುಸಾವಿರ ಜನರು ಸತ್ತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
Kannada BSI Bible 2016
ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
Kannada Bible (KNCL) BSI 2016
ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.