2 Samuel 24:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದೂತನು ಜೆರುಸಲೇಮನ್ನು ನಾಶಗೊಳಿಸಲು ಅದರತ್ತ ತನ್ನ ಕೈಯನ್ನು ಚಾಚಿದನು. ಆದರೆ ಸಂಭವಿಸಿದ ಕೆಟ್ಟಕಾರ್ಯಗಳ ಬಗ್ಗೆ ಯೆಹೋವನು ಪಶ್ಚಾತ್ತಾಪಪಟ್ಟನು. ಯೆಹೋವನು ಜನರನ್ನು ನಾಶಗೊಳಿಸಿದ ದೇವದೂತನಿಗೆ, “ಇಲ್ಲಿಗೆ ಸಾಕು! ನಿನ್ನ ಕೈಯನ್ನು ಕೆಳಗಿಳಿಸು” ಎಂದು ಹೇಳಿದನು. ಆಗ ಆ ಯೆಹೋವನ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
Kannada BSI Bible 2016
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
Kannada Bible (KNCL) BSI 2016
ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.