2 Samuel 24:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರನ್ನು ಕೊಂದ ದೂತನನ್ನು ದಾವೀದನು ನೋಡಿ ಯೆಹೋವನೊಂದಿಗೆ ಮಾತನಾಡಿದನು. ದಾವೀದನು ಯೆಹೋವನಿಗೆ, “ನಾನು ಪಾಪ ಮಾಡಿದೆನು. ನಾನು ತಪ್ಪು ಮಾಡಿದೆನು. ಆದರೆ ಈ ಜನರು ಕೇವಲ ಕುರಿಗಳಂತೆ ನಿರಪರಾಧಿಗಳು. ಅವರು ಯಾವ ತಪ್ಪನ್ನೂ ಮಾಡಲಿಲ್ಲ. ದಯಮಾಡಿ ನಿನ್ನ ದಂಡನೆಯು ನನಗೆ ಮತ್ತು ನನ್ನ ತಂದೆಯ ಕುಲದ ವಿರುದ್ಧವಾಗಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.
Kannada BSI Bible 2016
ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.
Kannada Bible (KNCL) BSI 2016
ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.