2 Samuel 24:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನ ಗಾದನು ದಾವೀದನ ಬಳಿಗೆ ಬಂದು, “ಹೋಗಿ, ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
Kannada BSI Bible 2016
ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ - ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.
Kannada Bible (KNCL) BSI 2016
ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.