2 Samuel 24:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರೌನನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ಯಜ್ಞವನ್ನು ಸಮರ್ಪಿಸಲು ನೀನು ಏನನ್ನು ಬೇಕಾದರೂ ತೆಗೆದುಕೊ. ಸರ್ವಾಂಗಹೋಮವನ್ನು ಅರ್ಪಿಸಲು ಇಲ್ಲಿ ಕೆಲವು ಹೋರಿಗಳಿವೆ, ನೊಗ ಮುಂತಾದ ಮರದ ಸಲಕರಣೆಗಳಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
Kannada BSI Bible 2016
ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರೌನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
Kannada Bible (KNCL) BSI 2016
ಆಗ ಅರೌನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದುದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಬಲಿದಾನಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.