2 Samuel 24:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.
Kannada BSI Bible 2016
ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೋವಾಬನು ಅರಸನಿಗೆ - ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಗಳನ್ನು ಈಗ ಇರುವದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ ಅಂದನು.
Kannada Bible (KNCL) BSI 2016
ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.