2 Samuel 24:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಬನು ರಾಜನಿಗೆ ಜನರ ಪಟ್ಟಿಯನ್ನು ಕೊಟ್ಟನು. ಇಸ್ರೇಲಿನಲ್ಲಿ ಕತ್ತಿಯನ್ನು ಬಳಸಬಲ್ಲ ಎಂಟು ಲಕ್ಷ ಜನರಿದ್ದರು. ಯೆಹೂದದಲ್ಲಿ ಐದು ಲಕ್ಷ ಜನರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
Kannada BSI Bible 2016
ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವಾಬನು ಅರಸನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ; ಯೆಹೂದ್ಯರಲ್ಲಿ ಐದು ಲಕ್ಷ.
Kannada Bible (KNCL) BSI 2016
ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳಲ್ಲಿ ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಹಾಗು ಯೆಹೂದ್ಯರಲ್ಲಿ ಐದು ಲಕ್ಷ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.