2 Samuel 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನ ವಂಶದವರ ಮತ್ತು ದಾವೀದನ ವಂಶದವರ ಮಧ್ಯೆ ಬಹಳ ಕಾಲದವರೆಗೆ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಲೇ ಇದ್ದನು. ಸೌಲನ ವಂಶವು ದುರ್ಬಲಗೊಳ್ಳುತ್ತಲೇ ಇದ್ದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.
Kannada BSI Bible 2016
ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುದಿವಸಗಳವರೆಗೆ ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡೆದಿತ್ತು. ದಾವೀದನು ಬಲಗೊಳ್ಳುತ್ತಾ ಬಂದನು, ಸೌಲನ ವಂಶವು ದುರ್ಬಲವಾಗುತ್ತಾ ಬಂದಿತು.
Kannada Bible (KNCL) BSI 2016
ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.