2 Samuel 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಹೆಂಡತಿಯಾದ ಮೀಕಲಳನ್ನು ನನ್ನ ಬಳಿಗೆ ಕಳುಹಿಸು. ಅವಳನ್ನು ನನಗೆ ಕೊಡುವುದಾಗಿ ಮಾತುಕತೆಯಾಗಿತ್ತು. ಅವಳನ್ನು ಪಡೆಯಲು ನಾನು ನೂರು ಜನ ಫಿಲಿಷ್ಟಿಯರನ್ನು ಕೊಂದಿದ್ದೇನೆ “ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.
Kannada BSI Bible 2016
ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು ಎಂಬದಾಗಿ ಆಜ್ಞಾಪಿಸಿದನು.
Kannada Bible (KNCL) BSI 2016
ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.