2 Samuel 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ” ಎಂದು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.
Kannada BSI Bible 2016
ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ದಾವೀದನ ವಿಷಯವಾಗಿ - ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವೆನೆಂದು ನುಡಿದಿದ್ದಾನಲ್ಲಾ ಎಂದು ಹೇಳಿಸಿದನು.
Kannada Bible (KNCL) BSI 2016
ಸರ್ವೇಶ್ವರ ದಾವೀದನ ವಿಷಯವಾಗಿ, “ನನ್ನ ದಾಸ ದಾವೀದನ ಮುಖಾಂತರ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸುವೆನು,” ಎಂದು ನುಡಿದಿದ್ದಾರಲ್ಲವೇ? ಎಂದು ಹೇಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗ ಅದನ್ನು ಮಾಡಿರಿ. ಏಕೆಂದರೆ, ‘ನಾನು ನನ್ನ ದಾಸನಾದ ದಾವೀದನ ಕೈಯಿಂದ ಜನರಾದ ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ, ಅವರ ಸಮಸ್ತ ಶತ್ರುಗಳ ಕೈಯಿಂದಲೂ ತಪ್ಪಿಸಿ ರಕ್ಷಿಸುವೆನು,’ ಎಂದು ಯೆಹೋವ ದೇವರು ದಾವೀದನ ವಿಷಯದಲ್ಲಿ ಹೇಳಿದ್ದಾರೆ,” ಎಂದನು.