2 Samuel 3:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ನೇರನು ಹೆಬ್ರೋನಿನಲ್ಲಿ ದಾವೀದನಿಗೆ ಈ ಮಾತುಗಳನ್ನು ಹೇಳಿದನು. ಬೆನ್ಯಾಮೀನ್ ವಂಶದವರಿಗೂ ಅವನು ಈ ಮಾತುಗಳನ್ನು ಹೇಳಿದನು. ಅಬ್ನೇರನ ಮಾತುಗಳು ಬೆನ್ಯಾಮೀನ್ ವಂಶದವರಿಗೆ ಮತ್ತು ಇಸ್ರೇಲಿನ ಜನರಿಗೆಲ್ಲರಿಗೂ ಒಳ್ಳೆಯ ಮಾತುಗಳೆಂದು ಕಂಡುಬಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.
Kannada BSI Bible 2016
ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲ್ಯರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವದಕ್ಕೋಸ್ಕರ ಹೆಬ್ರೋನಿಗೆ ಹೊರಟನು.
Kannada Bible (KNCL) BSI 2016
ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು, ಇಸ್ರಯೇಲರು ಹಾಗು ಬೆನ್ಯಾಮೀನ್ಯರು ಎಲ್ಲರು ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕಾಗಿ ಹೆಬ್ರೋನಿಗೆ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು.