2 Samuel 3:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ನೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ. ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಮಾಡುತ್ತಿರುವುದನ್ನೆಲ್ಲಾ ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ,
Kannada BSI Bible 2016
ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೇರನ ಮಗನಾದ ಅಬ್ನೇರನ ಸಂಗತಿಯು ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳುಕೊಳ್ಳುವದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬದನ್ನು ಕಂಡು ಹಿಡಿಯುವದಕ್ಕೂ ಬಂದಿದ್ದನಷ್ಟೆ ಎಂದು ಹೇಳಿ
Kannada Bible (KNCL) BSI 2016
ನೇರನ ಮಗನಾದ ಅಬ್ನೇರನ ಸಂಗತಿ ನಿಮಗೆ ಗೊತ್ತಿಲ್ಲವೇ? ಅವನು ನಿಮ್ಮನ್ನು ವಂಚಿಸುವುದಕ್ಕೂ ನಿಮ್ಮ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀವು ಏನು ಮಾಡುತ್ತೀರೆಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು.