2 Samuel 3:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.
Kannada BSI Bible 2016
ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರೆಲ್ಲರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ ಕುಷ್ಠರೋಗಿಗಳೂ ಕುಂಟರೂ ಕತ್ತಿಯಿಂದ ಹತರಾಗುವವರೂ ಭಿಕ್ಷೆ ಬೇಡುವವರೂ ಇದ್ದೇ ಇರಲಿ ಅಂದನು.
Kannada Bible (KNCL) BSI 2016
ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು.