2 Samuel 3:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಯೋವಾಬನಿಗೆ ಮತ್ತು ಅವನ ಜೊತೆಯಲ್ಲಿದ್ದ ಜನರಿಗೆಲ್ಲ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು ಮತ್ತು ಶೋಕಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಅಬ್ನೇರನಿಗಾಗಿ ಶೋಕಿಸಿ” ಎಂದು ಹೇಳಿದನು. ರಾಜನಾದ ದಾವೀದನೂ ಶವಸಂಸ್ಕಾರಕ್ಕೆ ಹೋದನು. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಸಮಾಧಿ ಮಾಡಿದರು. ಅಬ್ನೇರನ ಸಮಾಧಿಯ ಹತ್ತಿರ ರಾಜನಾದ ದಾವೀದನೂ ಇತರ ಜನರೂ ಗೋಳಾಡಿದರು. (Verses 31-32)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
Kannada BSI Bible 2016
ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ - ನಿಮ್ಮ ಬಟ್ಟೆಗಳನ್ನು ಹರಕೊಂಡು ಗೋಣೀತಟ್ಟುಗಳನ್ನು ಕಟ್ಟಿಕೊಂಡು ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡಿಯಿರಿ ಎಂದು ಆಜ್ಞಾಪಿಸಿ ತಾನು ಚಟ್ಟದ ಹಿಂದೆ ಹೋದನು.
Kannada Bible (KNCL) BSI 2016
ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.