2 Samuel 3:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.
Kannada BSI Bible 2016
ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು - ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ ಎಂದು ಆಣೆಯಿಟ್ಟು ಹೇಳಿದನು.
Kannada Bible (KNCL) BSI 2016
ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು.