2 Samuel 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನಿಗೆ ರಿಚ್ಪಳೆಂಬ ಹೆಸರಿನ ದಾಸಿಯಿದ್ದಳು. ಅವಳು ಅವನಿಗೆ ಹೆಂಡತಿಯಂತೆ ಇದ್ದಳು. ರಿಚ್ಪಳು ಅಯಾಹನ ಮಗಳು. ಈಷ್ಬೋಶೆತನು ಅಬ್ನೇರನಿಗೆ, “ನನ್ನ ತಂದೆಯ ಸೇವಕಿಯೊಡನೆ ಲೈಂಗಿಕ ಸಂಬಂಧವನ್ನು ಏಕೆ ಮಾಡುತ್ತಿರುವೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು.
Kannada BSI Bible 2016
ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿವಸ ಈಷ್ಬೋಶೆತನು ಅಬ್ನೇರನನ್ನು - ನೀನು ನನ್ನ ತಂದೆಯ ಉಪಪತ್ನಿಯನ್ನು ಕೂಡಿದ್ದೇಕೆ ಎಂದು ಕೇಳಿದನು.
Kannada Bible (KNCL) BSI 2016
ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯನ್ನು ಕೂಡಿದ್ದೇಕೆ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು.