2 Samuel 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಷ್ಬೋಶೆತನ ಮಾತುಗಳಿಂದ ಅಬ್ನೇರನು ಬಹಳ ಕೋಪಗೊಂಡನು. ಅಬ್ನೇರನು, “ನಾನು ಸೌಲನಿಗೂ ಅವನ ವಂಶದವರಿಗೂ ನಂಬಿಗಸ್ತನಾಗಿದ್ದೆನು. ನಾನು ನಿನ್ನನ್ನು ದಾವೀದನಿಗೆ ಒಪ್ಪಿಸಲಿಲ್ಲ ಹಾಗೂ ಅವನಿಂದ ನೀನು ಸೋಲುವಂತೆ ಮಾಡಲಿಲ್ಲ. ನಾನು ಯೆಹೂದಕ್ಕಾಗಿ ಕೆಲಸ ಮಾಡುವ ದ್ರೋಹಿಯಲ್ಲ. ಆದರೆ ಈಗ ನಾನು ಇಂತಹ ಕೆಟ್ಟ ಕೆಲಸವನ್ನು ಮಾಡಿದೆನೆಂದು ಹೇಳುತ್ತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
Kannada BSI Bible 2016
ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ನೇರನು ಈ ಮಾತನ್ನು ಕೇಳಿ ಉರಿಗೊಂಡು ಈಷ್ಬೋಶೆತನಿಗೆ - ಈವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ವಿುತ್ರರಿಗೂ ದಯೆತೋರಿಸುತ್ತಿದ್ದೆನಲ್ಲಾ; ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವದಕ್ಕೆ ನಾನೇನು ಯೆಹೂದನಾಯಿಯ ತಲೆಯೋ?
Kannada Bible (KNCL) BSI 2016
ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈವರೆಗೆ ನಾನು ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಬಂಧುಮಿತ್ರರಿಗೂ ಪ್ರಾಮಾಣಿಕನಾಗಿ ನಡೆದುಕೊಂಡೆನಲ್ಲವೇ? ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲ. ಆದರೂ ಈಗ ಈ ಹೆಂಗಸಿನ ಕಾರಣ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ನೇರನು ಈಷ್ಬೋಶೆತನ ಮಾತುಗಳಿಗೆ ಬಹುಕೋಪಗೊಂಡು, “ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿವಸದವರೆಗೂ ಯೆಹೂದವನ್ನು ವಿರೋಧಿಸಿ, ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಸಹೋದರರಿಗೂ, ಸ್ನೇಹಿತರಿಗೂ ದಯೆ ತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ತಪ್ಪು ಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?