2 Samuel 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಬ್ರೋನಿನಲ್ಲಿ ಅಬ್ನೇರನು ಸತ್ತನೆಂಬುದು ಸೌಲನ ಮಗನಾದ ಈಷ್ಬೋಶೆತನಿಗೆ ತಿಳಿಯಿತು. ಈಷ್ಬೋಶೆತನು ಮತ್ತು ಅವನ ಜನರು ಬಹಳ ಭಯಗೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲರೆಲ್ಲರು ಕಳವಳಗೊಂಡರು.
Kannada BSI Bible 2016
ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲ್ಯರೆಲ್ಲರೂ ಕಳವಳಗೊಂಡರು.
Kannada Bible (KNCL) BSI 2016
ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನ ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿತು; ಅವನ ಕೈಗಳು ಜೋಲುಬಿದ್ದಂತಾದವು; ಇಸ್ರಯೇಲರೆಲ್ಲರು ಕಳವಳಕ್ಕೆ ಈಡಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ನೇರನು ಹೆಬ್ರೋನಿನಲ್ಲಿ ಮರಣ ಹೊಂದಿದನೆಂದು ಸೌಲನ ಮಗ ಈಷ್ಬೋಶೆತನು ಕೇಳಿದಾಗ, ಅವನು ಧೈರ್ಯವನ್ನು ಕಳೆದುಕೊಂಡನು. ಇಸ್ರಾಯೇಲರೆಲ್ಲರು ಕಳವಳಗೊಂಡರು.