2 Samuel 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,
Kannada BSI Bible 2016
ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿತೀರಿಸುವದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇ ಬಿಡುವೆನು ಎಂದು ಹೇಳಿ
Kannada Bible (KNCL) BSI 2016
ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ, ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನಿರ್ದೋಷಿಯನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲ್ಲಿಸುವೆನು. ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾರಣೆ ಮಾಡಿ, ನಿಮ್ಮನ್ನು ಭೂಮಿಯಿಂದ ತೆಗೆದುಬಿಡುವೆನು,” ಎಂದನು.