2 Samuel 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಆ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ನೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.
Kannada BSI Bible 2016
ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಇಡಿಸಿದನು.
Kannada Bible (KNCL) BSI 2016
ಅಂತೆಯೇ ತನ್ನ ಆಳುಗಳಿಗೆ ಆಜ್ಞಾಪಿಸಿದನು. ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಇಬ್ನೇರನ ಸಮಾಧಿಯಲ್ಲಿ ಹೂಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ತನ್ನ ಜನರಿಗೆ ಆಜ್ಞಾಪಿಸಿದ್ದರಿಂದ, ಅವರು ಅವರನ್ನು ಕೊಂದುಹಾಕಿ, ಅವರ ಕೈಕಾಲುಗಳನ್ನು ಕಡಿದು, ಹೆಬ್ರೋನಿನ ಕೊಳದ ಬಳಿಯಲ್ಲಿ ತೂಗುಹಾಕಿದರು. ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು, ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.