2 Samuel 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.
Kannada BSI Bible 2016
ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನ ಮಗನಿಗೆ ಬಾಣ, ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಬೇರೋತ್ ಎಂಬದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;
Kannada Bible (KNCL) BSI 2016
ಸೌಲನ ಮಗನಿಗೆ ಬಾಣ ಹಾಗು ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಇವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಈ ಬೇರೋತ್ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸೌಲನ ಮಗನಿಗೆ ಸೇನಾಪತಿಗಳು ಇಬ್ಬರಿದ್ದರು. ಒಬ್ಬನ ಹೆಸರು ಬಾಣನು. ಮತ್ತೊಬ್ಬನ ಹೆಸರು ರೇಕಾಬನು. ಇವರು ಬೆನ್ಯಾಮೀನ್ ಗೋತ್ರದಲ್ಲಿ ಬೇರೋತ್ ಗ್ರಾಮದವನಾದ ರಿಮ್ಮೋನನ ಮಕ್ಕಳು. ಏಕೆಂದರೆ ಬೇರೋತ್ ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.