2 Samuel 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, “ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ. ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿ ತೀರಿಸಿದ್ದಾನೆ” ಅಂದನು.
Kannada BSI Bible 2016
ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿ - ಇಗೋ, ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ! ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿತೀರಿಸಿದ್ದಾನೆ ಅಂದರು.
Kannada Bible (KNCL) BSI 2016
ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋಶೆತನ ತಲೆಯನ್ನು ತಂದು ಅರಸನಿಗೆ, “ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಯೆಹೋವ ದೇವರು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲನಿಗೂ, ಅವನ ಸಂತಾನಕ್ಕೂ ಮುಯ್ಯಿ ತೀರಿಸಿದ್ದಾರೆ,” ಎಂದರು.