2 Samuel 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.
Kannada BSI Bible 2016
ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು.
Kannada Bible (KNCL) BSI 2016
ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.