2 Samuel 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಿಜವಾಗಿಯೂ ತನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದ್ದಾನೆಂಬುದನ್ನೂ ಆತನು ತನ್ನ ಜನರಾದ ಇಸ್ರೇಲರಿಗಾಗಿ ನನ್ನ ರಾಜ್ಯವನ್ನು ಸ್ಥಿರಪಡಿಸಿದ್ದಾನೆಂತಲೂ ದಾವೀದನು ಇದರ ಮೂಲಕ ತಿಳಿದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ದಾವೀದನು, “ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ” ಎಂದು ತಿಳಿದುಕೊಂಡನು.
Kannada BSI Bible 2016
ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ದಾವೀದನು - ಯೆಹೋವನು ನನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿ ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದನೆಂದು ತಿಳಿದುಕೊಂಡನು.
Kannada Bible (KNCL) BSI 2016
ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.