2 Samuel 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.
Kannada BSI Bible 2016
ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.
Kannada Bible (KNCL) BSI 2016
ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು.