2 Samuel 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.
Kannada BSI Bible 2016
ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೋಗಿ ಅವರನ್ನು ಸೋಲಿಸಿ ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆಂದು ಹೇಳಿ ಆ ಯುದ್ಧಸ್ಥಳಕ್ಕೆ ಬಾಳ್‍ಪೆರಾಚೀಮೆಂದು ಹೆಸರಿಟ್ಟನು.
Kannada Bible (KNCL) BSI 2016
ಆದುದರಿಂದ ಅವನು ಹೋಗಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ಸರ್ವೇಶ್ವರ ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ ಆ ಯುದ್ಧಸ್ಥಳಕ್ಕೆ, ‘ಬಾಳ್ ಪೆರಾಚೀಮ್’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ದಾವೀದನು ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ಯೆಹೋವ ದೇವರು ನನ್ನ ಶತ್ರುಗಳನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ, ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.