2 Samuel 5:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.
Kannada BSI Bible 2016
ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಅವರ ಮೇಲೆ ಬೀಳು ಅಂದನು.
Kannada Bible (KNCL) BSI 2016
ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ಯೆಹೋವ ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.