2 Samuel 6:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.
Kannada BSI Bible 2016
ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗೆ ತನ್ನ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.
Kannada Bible (KNCL) BSI 2016
ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.