2 Samuel 6:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಗರಕ್ಕೆ ತರುವಾಗ ದಾವೀದನು ಮತ್ತು ಇಸ್ರೇಲರೆಲ್ಲರು ಸಂತೋಷದಿಂದ ಆರ್ಭಟಿಸಿದರು; ತುತ್ತೂರಿಯನ್ನು ಊದಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.
Kannada BSI Bible 2016
ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಆರ್ಭಟಿಸುತ್ತಾ ತುತೂರಿ ಊದುತ್ತಾ ಯೆಹೋವನ ಮಂಜೂಷವನ್ನು ತಂದರು.
Kannada Bible (KNCL) BSI 2016
ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರ ಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ದಾವೀದನೂ, ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮಂಜೂಷವನ್ನು ಆರ್ಭಟದಿಂದಲೂ, ತುತೂರಿಯ ಶಬ್ದದಿಂದಲೂ ಬರಮಾಡಿದರು.