2 Samuel 6:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
Kannada BSI Bible 2016
ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯವಿುತ ಸ್ಥಳದಲ್ಲಿಟ್ಟರು; ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.
Kannada Bible (KNCL) BSI 2016
ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು.