2 Samuel 6:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.
Kannada BSI Bible 2016
ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮಂಜೂಷವನ್ನು ತರುವದಕ್ಕಾಗಿ ಅವರೆಲ್ಲರ ಸಹಿತ ಯೆಹೂದದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾದದ್ದು.
Kannada Bible (KNCL) BSI 2016
ಆ ಮಂಜೂಷವು ದೇವನಾಮದಿಂದ, ಅಂದರೆ ‘ಕೆರೂಬಿಯರ ನಡುವೆ ಆಸೀನರಾಗಿರುವ ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮದಿಂದ ಸುಪ್ರಸಿದ್ಧವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೆರೂಬಿಗಳ ನಡುವೆ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು ತನ್ನ ಸಂಗಡ ಇದ್ದ ಸಮಸ್ತ ಜನರನ್ನು ಕರೆದುಕೊಂಡು, ಯೆಹೂದದ ಬಾಲಾ ಎಂಬಲ್ಲಿಗೆ ಹೊರಟನು.