2 Samuel 6:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.
Kannada BSI Bible 2016
ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸನ್ನಿಧಿಯಲ್ಲಿಯಷ್ಟೆ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟು ನನ್ನನ್ನೇ ಆರಿಸಿಕೊಂಡು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಕುಣಿದಾಡುವೆನು.
Kannada Bible (KNCL) BSI 2016
ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.