2 Samuel 6:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನ ಮುಂದೆ ಇನ್ನೂ ಹೀನವಾಗಿ ಕಾಣಿಸಿಕೊಳ್ಳುವುದಕ್ಕೂ ನನ್ನನ್ನು ನಾನು ಕಡೆಗಣಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ. ಬಹುಶಃ ನೀನು ನನ್ನನ್ನು ಗೌರವಿಸದಿರಬಹುದು, ಆದರೆ ನೀನು ಯಾವ ದಾಸಿಯರ ಬಗ್ಗೆ ಮಾತನಾಡಿದೆಯೋ ಅವರು ನನ್ನನ್ನು ಗೌರವಿಸುತ್ತಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು” ಎಂದನು.
Kannada BSI Bible 2016
ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರಹೊಂದುವದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು ಅಂದನು.
Kannada Bible (KNCL) BSI 2016
ಇದಕ್ಕಿಂತಲೂ ಹೆಚ್ಚಾದ ತಿರಸ್ಕಾರ ಹೊಂದುವುದಕ್ಕೂ ನನ್ನನ್ನೇ ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ನಾನು ಸಿದ್ಧನು. ನೀನು ಹೇಳಿದ ದಾಸಿಯರಾದರೋ ನನ್ನನ್ನು ಹೇಗೂ ಸನ್ಮಾನಿಸುವರು!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇನ್ನೂ ಇದಕ್ಕಿಂತ ಅಲ್ಪನಾಗಿರುವುದಕ್ಕೂ, ಹೀನೈಸಿಕೊಳ್ಳುವುದಕ್ಕೂ, ಸಿದ್ಧನಾಗಿದ್ದೇನೆ. ಆದರೆ ನೀನು ಹೇಳಿದ ದಾಸಿಯರಿಂದ ನಿಶ್ಚಯವಾಗಿ ಘನತೆಯನ್ನು ಹೊಂದುವೆನು,” ಎಂದನು.