2 Samuel 6:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಜನರು ಪವಿತ್ರ ಪೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದ್ವಾನ ಮನೆಯಿಂದ ದೇವರ ಪವಿತ್ರ ಪೆಟ್ಟಿಗೆಯನ್ನು ತಂದರು. ಅಬೀನಾದ್ವಾನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ಹೊಡೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.
Kannada BSI Bible 2016
ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಬಂಡಿಯನ್ನು ಹೊಡೆದರು.
Kannada Bible (KNCL) BSI 2016
ದೇವರ ಆ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗು ಅಹೀಯೋವನು ಆ ಬಂಡಿಯನ್ನು ನಡೆಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.