2 Samuel 6:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.
Kannada BSI Bible 2016
ದಾವೀದನೂ ಇಸ್ರಾಯೇಲ್‌ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ಯೆಹೋವನ ಮುಂದೆ ನರ್ತನಮಾಡುತ್ತಾ ಹೋದರು.
Kannada Bible (KNCL) BSI 2016
ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ಸ್ವರಮಂಡಲ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ಯೆಹೋವ ದೇವರ ಮುಂದೆ ಹೋದರು.