2 Samuel 6:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
Kannada BSI Bible 2016
ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಈ ತಪ್ಪಿನ ಸಲವಾಗಿ ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
Kannada Bible (KNCL) BSI 2016
ಆಗ ಸರ್ವೇಶ್ವರ ಉಜ್ಜನ ಮೇಲೆ ಕೋಪಗೊಂಡರು. ಅಂಥ ಅಗೌರವಕ್ಕಾಗಿ ಅವನನ್ನು ದಂಡಿಸಿದರು. ಅವನು ಅಲ್ಲೇ ದೇವರ ಮಂಜೂಷದ ಬಳಿ ಸತ್ತುಬಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.