2 Samuel 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಉಜ್ಜನನ್ನು ಕೊಂದದ್ದರಿಂದ ದಾವೀದನು ತಳಮಳಗೊಂಡನು. ದಾವೀದನು ಆ ಸ್ಥಳವನ್ನು “ಪೆರೆಚುಜ್ಜಾ” ಎಂದು ಕರೆದನು. ಆ ಸ್ಥಳವನ್ನು ಇಂದಿಗೂ “ಪೆರೆಚುಜ್ಜಾ” ಎಂದೇ ಕರೆಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.
Kannada BSI Bible 2016
ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚುಜ್ಜಾ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
Kannada Bible (KNCL) BSI 2016
ಸರ್ವೇಶ್ವರ ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ‘ಪೆರೆಚುಜ್ಜಾ’ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ, ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.