2 Samuel 7:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.
Kannada BSI Bible 2016
ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದಾಗ
Kannada Bible (KNCL) BSI 2016
ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅರಸನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅರಸನು ವಿಶ್ರಾಂತಿಯಿಂದ ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ,