2 Samuel 7:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ. (Verses 10-11)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.
Kannada BSI Bible 2016
ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.
Kannada Bible (KNCL) BSI 2016
ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.