2 Samuel 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.
Kannada BSI Bible 2016
ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು.
Kannada Bible (KNCL) BSI 2016
ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.