2 Samuel 7:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನಾದ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದಿಂದ ನಿರ್ಮಿಸಿದ ವೈಭವದ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಪವಿತ್ರ ಪೆಟ್ಟಿಗೆಯನ್ನು ಇನ್ನೂ ಗುಡಾರದಲ್ಲಿಯೇ ಇಟ್ಟಿದ್ದೇನೆ. ಅದಕ್ಕಾಗಿ ಒಂದು ಆಲಯವನ್ನು ಕಟ್ಟಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.
Kannada BSI Bible 2016
ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.
Kannada Bible (KNCL) BSI 2016
ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.
Recommended Reading