2 Samuel 7:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರಾದ ಯೆಹೋವನೇ, ಈಗ ನೀನು ನನ್ನ ಬಗ್ಗೆ ಮಾತನಾಡಿರುವೆ. ನಾನು ನಿನ್ನ ಸೇವಕ. ನೀನು ನನ್ನ ಕುಲದ ಬಗ್ಗೆಯೂ ವಾಗ್ದಾನ ಮಾಡಿರುವೆ. ನಿನ್ನ ವಾಗ್ದಾನಗಳನ್ನು ನೆರವೇರಿಸು. ನೀನು ವಾಗ್ದಾನ ಮಾಡಿದ ಕಾರ್ಯಗಳನ್ನು ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ಯೆಹೋವನೇ! ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನು ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
Kannada BSI Bible 2016
ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
Kannada Bible (KNCL) BSI 2016
“ದೇವರೇ, ಸರ್ವೆಶ್ವರಾ, ತಾವು ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ದೇವರಾದ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.