2 Samuel 7:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಿನ್ನ ಹೆಸರು ಎಂದೆಂದೂ ಗೌರವಿಸಲ್ಪಡುತ್ತದೆ. ಜನರೆಲ್ಲರೂ ‘ಸರ್ವಶಕ್ತನಾದ ಯೆಹೋವನೇ ಇಸ್ರೇಲರ ದೇವರು!’ ಎಂದು ಹೇಳುವರು. ಅಲ್ಲದೆ ನಿನ್ನ ಸೇವಕನಾದ ದಾವೀದನ ಕುಟುಂಬವು ನಿನ್ನ ಸನಿಧಿಯಲ್ಲಿ ಸ್ಥಿರವಾಗುವುದು” ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲರ ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.
Kannada BSI Bible 2016
ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲ್‍ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.
Kannada Bible (KNCL) BSI 2016
‘ಸರ್ವಶಕ್ತರಾದ ಸರ್ವೆಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನಿಮ್ಮ ಹೆಸರು ಎಂದೆಂದಿಗೂ ಶ್ರೇಷ್ಠವಾಗಿರುತ್ತದೆ. ಆಗ ಜನರು, ‘ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲರ ದೇವರು,’ ಎಂದು ಹೇಳುವರು. ಇದಲ್ಲದೆ ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರುವುದು.