2 Samuel 7:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
Kannada BSI Bible 2016
ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್‍ದೇವರೇ, ನೀನು ನಿನ್ನ ಸೇವಕನಿಗೆ - ನಾನು ನಿನಗೋಸ್ಕರ ಮನೆ ಕಟ್ಟುವೆನೆಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವದಕ್ಕೆ ಧೈರ್ಯಗೊಂಡನು.
Kannada Bible (KNCL) BSI 2016
ಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸೇನಾಧೀಶ್ವರ ಯೆಹೋವ ದೇವರೇ, ಇಸ್ರಾಯೇಲಿನ ದೇವರೇ, ‘ನಾನು ನಿಮಗೆ ಮನೆಯನ್ನು ಕಟ್ಟುವೆನೆಂದು’ ನಿಮ್ಮ ಸೇವಕನಿಗೆ ಪ್ರಕಟ ಮಾಡಿದ್ದರಿಂದ, ನಿಮ್ಮನ್ನು ಕುರಿತು ಈ ಪ್ರಾರ್ಥನೆಯನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.