2 Samuel 7:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾತಾನನು ರಾಜನಾದ ದಾವೀದನಿಗೆ, “ನೀನು ನಿಜವಾಗಿಯೂ ಏನನ್ನು ಮಾಡಬೇಕೆಂದಿರುವೆಯೋ ಅದನ್ನು ಮಾಡು; ಯೆಹೋವನು ನಿನ್ನೊಂದಿಗಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾತಾನನು ಅರಸನಿಗೆ, “ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ” ಅಂದನು.
Kannada BSI Bible 2016
ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾತಾನನು ಅರಸನಿಗೆ - ಆಗಲಿ ಮನಸ್ಸಿದ್ದಂತೆ ಮಾಡು, ಯೆಹೋವನು ನಿನ್ನ ಸಂಗಡ ಇರುತ್ತಾನೆ ಅಂದನು.
Kannada Bible (KNCL) BSI 2016
ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.