2 Samuel 7:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
Kannada BSI Bible 2016
ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.
Kannada Bible (KNCL) BSI 2016
“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.